Publish Date: Wed, 29 May 2024 (11:04 IST)
Updated Date: Wed, 29 May 2024 (11:08 IST)
ಚಿಕ್ಕಬಳ್ಳಾಪುರ: ತನ್ನದೇ ಶಾಲೆಯಲ್ಲಿ ಓದುತ್ತಿರುವ 13 ವರ್ಷದ ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕ ನಿರಂತರವಾಗಿ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣವಾದ ಘಟನೆ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಈ ಹೇಯ ಕೃತ್ಯ ನಡೆದಿದೆ. 7 ನೇ ತರಗತಿ ಮುಗಿಸಿ 8 ನೇ ತರಗತಿಗೆ ಕಾಲಿಡಬೇಕಿದ್ದ ವಿದ್ಯಾರ್ಥಿನಿಯ ಮೇಲೆ ಮುಖ್ಯ ಶಿಕ್ಷಕ ನಿರಂತರ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ.
ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಎಂಬ ದುರುಳ ಕಳೆದ ಆರೇಳು ತಿಂಗಳಿನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬೇಸಿಗೆ ರಜೆಯಲ್ಲಿ ಬಾಲಕಿಗೆ ಮುಟ್ಟು ಬಾರದೇ ಇದ್ದಾಗ ಗಾಬರಿಗೊಂಡ ತಾಯಿ ವೈದ್ಯರ ಬಳಿಗೆ ಕರೆದೊಯ್ದಿದ್ದರು. ಈ ವೇಳೆ ಆಕೆ ಗರ್ಭಿಣಿ ಎನ್ನುವುದು ಗೊತ್ತಾಗಿದೆ.
ತಕ್ಷಣವೇ ಬಾಲಕಿಯಿಂದ ಹೇಳಿಕೆ ಪಡೆದುಕೊಂಡ ಪೊಲೀಸರು ಆರೋಪಿ ವೆಂಕಟೇಶ್ ನನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಗೆ ಆಪ್ತಸಮಾಲೋಚನೆ ನಡೆಸಲಾಗಿದೆ.