Webdunia - Bharat's app for daily news and videos

Install App

ಟ್ಯೂಶನ್‌ಗೆ ಬಂದ ವಿದ್ಯಾರ್ಥಿಗಳಿಗೆ ಸೆಕ್ಸ್ ಸುಖ ನೀಡುವಂತೆ ಒತ್ತಾಯಿಸುತ್ತಿದ್ದ ಶಿಕ್ಷಕಿ ಬಂಧನ

Webdunia
ಗುರುವಾರ, 26 ನವೆಂಬರ್ 2015 (16:59 IST)
ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳನ್ನು ಸೆಕ್ಸ್ ಸುಖಕ್ಕಾಗಿ ಬಳಸಿಕೊಂಡು ಲೈಂಗಿಕ ಕಿರುಕುಳ ನೀಡಿದ 33 ವರ್ಷ ವಯಸ್ಸಿನ ಶಿಕ್ಷಕಿ ಡೊಲ್ಫಿ ಸೆಕ್ವೈರಾಳನ್ನು ಪೊಲೀಸರು ಬಂಧಿಸಿದ್ದಾರೆ.
   
ಹಲವಾರು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಕರಾವಳಿ ತೀರದ ಉಲ್ಲಾಳ ಪಟ್ಟಣದಲ್ಲಿರುವ ಪ್ರತಿಷ್ಠಿತ ಶಾಲೆಯ ಶಿಕ್ಷಕಿಯಾದ ಡೊಲ್ಫಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಪೊಲೀಸ್ ಮೂಲಗಳ ಪ್ರಕಾರ ಶಿಕ್ಷಕಿ ಡೊಲ್ಫಿ, 6ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸಾಮಾಜಿಕ ಜ್ಞಾನ ಮತ್ತು ಆಂಗ್ಲ ಭಾಷೆಯನ್ನು ಕಲಿಸುತ್ತಿದ್ದರು ಎನ್ನಲಾಗಿದೆ. 6ನೇ ಮತ್ತು 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಸೆಕ್ಸ್‌ಗಾಗಿ ಒತ್ತಾಯಿಸುತ್ತಿದ್ದಳು. ಹಲವಾರು ವಿದ್ಯಾರ್ಥಿಗಳ ಆಕೆಯ ಜಾಲದಲ್ಲಿ ಬಿದ್ದು ಶಿಕ್ಷಣದ ಭವಿಷ್ಯದ ದೃಷ್ಟಿಯಿಂದ ಮೌನವಾಗಿದ್ದರು ಎನ್ನಲಾಗಿದೆ.
 
ಶಾಲೆಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಟ್ಯೂಶನ್ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿಗಳೊಂದಿಗೆ ಸೆಕ್ಸ್ ಸುಖ ಅನುಭವಿಸುತ್ತಿದ್ದಳು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ 
 
ಆದರೆ, ಒಬ್ಬ ವಿದ್ಯಾರ್ಥಿ ಶಿಕ್ಷಕಿ ಡೊಲ್ಫಿಯ ನಿರಂತರ ಲೈಂಗಿಕ ಕಿರುಕುಳದ ಕಾಟವನ್ನು ತಾಳದೆ ಪೋಷಕರಿಗೆ ಮಾಹಿತಿ ನೀಡಿದ್ದಾನೆ.    
 
ಶಿಕ್ಷಕಿಯ ವರ್ತನೆಯಿಂದ ಆಘಾತಗೊಂಡ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೋಷಕರು ನೀಡಿದ ದೂರಿನ ಆಧಾರದ ಹಿನ್ನೆಲೆಯಲ್ಲಿ, ಶಿಕ್ಷಕಿ ಡೊಲ್ಫಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ