Select Your Language

Notifications

webdunia
webdunia
webdunia
webdunia

ಶಾಲಾ ಮಕ್ಕಳಿಂದ ಮರ ಕಡಿಯದಂತೆ ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ

ಶಾಲಾ ಮಕ್ಕಳಿಂದ  ಮರ ಕಡಿಯದಂತೆ ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ
bangalore , ಗುರುವಾರ, 9 ಸೆಪ್ಟಂಬರ್ 2021 (19:36 IST)
ಬೆಂಗಳೂರು: ತಮ್ಮ ಶಾಲೆ ಆವರಣದ ಆಟದ ಮೈದಾನದಲ್ಲಿರುವ ಮರಗಳನ್ನು ಕಡಿಯದಂತೆ ಆಗ್ರಹಿಸಿ ಪೀಣ್ಯ ದಾಸರಹಳ್ಳಿಯ ಅಬ್ಬಿಗೆರೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಅಪ್ಪಿಕೋ ಚಳವಳಿ ರೀತಿಯಲ್ಲಿ ಪ್ರತಿಭಟನೆ ನೆಡೆಸಿದ್ದಾರೆ.
 
ರಸ್ತೆಯನ್ನು ವಿಸ್ತರಣೆ ಮಾಡಲು ಮರಗಳನ್ನು ಕಡಿಯಲು ಬಿಬಿಎಂಪಿ ಏಕಾಏಕಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಅಬ್ಬಿಗೆರೆ ಸರಕಾರಿ ಶಾಲಾ ಮಕ್ಕಳು ಕೈಯಲ್ಲಿ ನಾಮಫಲಕಗಳನ್ನು ಹಿಡಿದು, ಮರಗಳನ್ನು ಸುತ್ತುವರಿದು ತಬ್ಬಿಕೊಂಡು ಕಡಿಯದಂತೆ ಶಾಲಾ ಆವರಣದಲ್ಲಿ ಮನವಿ ಮಾಡುತ್ತಿದ್ದಾರೆ.
 
ಅಬ್ಬಿಗೆರೆ ಸರಕಾರಿ ಶಾಲೆ ಆವರಣದಲ್ಲಿರುವ ಮೈದಾನದಲ್ಲಿ 100ಕ್ಕೂ ಹೆಚ್ಚು ಮರಗಳಿವೆ. ಅಬ್ಬಿಗೆರೆಯಿಂದ ಚಿಕ್ಕಬಾಣಾವರಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯನ್ನು ಅಗಲೀಕರಣ ಮಾಡಲು ಪಾಲಿಕೆ ಅಧಿಕಾರಿಗಳು, ಕಾಂಟ್ರಾಕ್ಟರ್ ಗಳು ಮುಂದಾಗಿದ್ದಾರೆ. ಈ ಅಗಲೀಕರಣ ಅವೈಜ್ಞಾನಿಕವಾಗಿದ್ದು ಯಾವುದೇ ಕಾರಣಕ್ಕೂ ಮುಂದುವರೆಸದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೆ ಮನವಿ ಮಾಡುತ್ತಿದ್ದಾರೆ.
 
20 ವರ್ಷದ ಮರಗಳು: 
 
 
ಜಿಂದಾಲ್ ಜುಬ್ಲೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಮತ್ತು ಈಗ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಶಿಕ್ಷಕರು, ಮುಖ್ಯೋಪಾದ್ಯಾಯರು ಮತ್ತು ಸ್ಥಳೀಯರನ್ನು ಈಟಿವಿ ಭಾರತ ಮತನಾಡಿಸಿದಾಗ ಏನಿಲ್ಲವೆಂದರೂ 15 ರಿಂದ 20 ವರ್ಷದ ಆಮ್ಲಜನಕ ಎತೇಚ್ಛವಾಗಿ ಪೂರೈಸುವ ಮರಗಳು ಇವಾಗಿದ್ದು, ಈ ಶಾಲೆ ಕೂಡ 30 ವರ್ಷ ಹಳೆಯದಾದ ಶಾಲೆಯಾಗಿದೆ. ಶಿಕ್ಷಣ ಅಥವಾ ಅರಣ್ಯ ಇಲಾಖೆಯಾಗಲಿ ಈ ಕುರಿತು ಯಾವುದೇ ಸೂಚನೆ ನೋಟಿಸ್ ನೀಡಿಲ್ಲ ಎಂದು ಹೇಳಿದರು.
 
ಜನಪ್ರತಿನಿಧಿಗಳ ಅಸಡ್ಡೆ: 
 
 
ಮುಂದಿನ ಲಕ್ಷ್ಮಿಪುರಕ್ಕೆ ಹೋಗುವ ರಸ್ತೆ ಪಾರ್ಕ್ ಪಕ್ಕದಲ್ಲಿದೆ ಕಳೆದ ಒಂದು ವಾರದಿಂದ ಮರ ಕಡಿಯಲು ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಸ್ಥಳೀಯ ಎಂ.ಎಲ್.ಎ, ಮಾಜಿ ಪಾಲಿಕೆ ಸದಸ್ಯರಿಗೆ ಮನವಿ ಸಲ್ಲಿಸಲಾಗಿದೆ ಆದರೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
 
ಪಾಲಿಕೆ ಅಧಿಕಾರಿಗಳ ನೋ ರೆಸ್ಪಾಂಸ್: 
 
ಈ ಕುರಿತು ಪೀಣ್ಯ ದಾಸರಹಳ್ಳಿ ವಿಭಾಗದ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
students

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ಐವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ