ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
ಹಿಜಾಬ್ ಪರವಾಗಿ ಕೋರ್ಟ್ ತೀರ್ಪು ನೀಡಿದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಅಂತ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ. 3 ದಿನಗಳ ಕಾಲ ಶಾಲಾ-ಕಾಲೇಜಿಗೆ ರಜೆ ಘೋಷಣೆ ಕುರಿತು ಟ್ವೀಟ್ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ.