ಕೊರೋನಾ ಹಿನ್ನೆಲೆ 2020 ಮಾರ್ಚ್‌ನಲ್ಲಿ ಶಾಲೆ
ಮುಚ್ಚಲಾಗಿದ್ದು, ಇದೀಗ ವಿದ್ಯಾರ್ಥಿಗಳು ಮತ್ತೆ ಶಾಲೆಯತ್ತ ಮುಖ ಮಾಡಿದ್ದಾರೆ. ವಿದ್ಯಾರ್ಥಿಗಳ ಕಲಿಕೆ ಸಂಪೂರ್ಣ ಕುಂಠಿತವಾಗಿದ್ದು, ಶಾಲೆ ಆರಂಭಿಸುವುದು ಅನಿವಾರ್ಯವಾಗಿದೆ.
ಇದೀಗ ಕೊರೋನಾ ಮೂರನೇ ಅಲೆ, ಡೆಲ್ಟಾ ಪ್ಲಸ್ ಹಾವಳಿಯ ಭೀತಿ ಎದುರಾಗಿದೆ. ಆದರೆ ಕೊರೋನಾ ಸಾಂಕ್ರಾಮಿಕ ಸೋಂಕು. ಅದರೊಂದಿಗೆ ಬದುಕಬೇಕಾದ ಅನಿವಾರ್ಯತೆ ಎದುರಾಗಿದೆ. ಶಾಲೆಗೆ ಬರುವ ಮಕ್ಕಳಿಗೆ ಹಾಜರಾತಿ ಕಡ್ಡಾಯವಾಗಿಲ್ಲ.ಮೊಬೈಲ್‌ನಲ್ಲಿ ಮಕ್ಕಳ ಕಲಿಕೆ ಆಸಕ್ತಿ ಕಡಿಮೆ ಆಗಿದ್ದು, ಶಾಲೆ ಆರಂಭ ಅನಿವಾರ್ಯವಾಗಿದೆ. ಆದರೆ ಶಾಲೆಗೆ ಬರುವ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ.
ಶಾಲೆಗೆ ಬರುವ ಮಕ್ಕಳಿಗೆ ಪೋಷಕರ ಅನುಮತಿ ಪ್ರಮಾಣ ಪತ್ರ ಕಡ್ಡಾಯವಾಗಿದೆ.ಶಾಲೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಆಗದಂತೆ ಡಿಡಿಪಿಐಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಜೊತೆಗೆ ಕರ್ತವ್ಯಕ್ಕೆ ಹಾಜರಾಗುವ ಶಿಕ್ಷಕರು ಕೋವಿಡ್ ಲಸಿಕೆ ಪಡೆದಿರಬೇಕು. ಪಡೆಯದೇ ಹಾಜರಾಗುವಂತಿಲ್ಲ. ಲಸಿಕೆ ಪಡೆಯದೇ ಕರ್ತವ್ಯಕ್ಕೆ ಹಾಜರಾಗದಿರುವವರ ರಜೆಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸಲಾಗುವುದು.