Select Your Language

Notifications

webdunia
webdunia
webdunia
webdunia

ಸೋಮವಾರದಿಂದ ಶಾಲೆ ಒಪೆನ್

ಸೋಮವಾರದಿಂದ ಶಾಲೆ ಒಪೆನ್
ಬೆಂಗಳೂರು , ಗುರುವಾರ, 27 ಜನವರಿ 2022 (15:27 IST)
ಶಾಲೆಯಲ್ಲಿ ಈ ಬಾರಿ ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ.
ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಹೇಳಿದರು. ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಜಬ್ ಕೇಸರಿ ಶಾಲು ವಿವಾದ