Publish Date: Wed, 06 Feb 2019 (06:51 IST)
Updated Date: Wed, 06 Feb 2019 (06:53 IST)
ಬೆಂಗಳೂರು : ನಾಳೆಯಿಂದ ಪರದೆ ಒಪನ್ ಆಗುತ್ತದೆ. ನಿಮಗೆ ಎಲ್ಲಾ ಮಾಹಿತಿ ಸಿಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಸರ್ಕಾರ ಸುಭದ್ರವಾಗಿದೆ. ನಾನು ಉತ್ತಮ ಬಜೆಟ್ ಮಂಡನೆ ಮಾಡುತ್ತೇನೆ. ಬಿಜೆಪಿಯವರ ಹೇಳಿಕೆಗೆ ಉತ್ತರ ಕೊಡುವುದು ಅನಾವಶ್ಯಕ. ಉತ್ತರ ಕೊಡುವ ವಿಷಯವೇ ಅದು ಅಲ್ಲ. ಬಿಜೆಪಿಯವರು ಯಾವುದೋ ಲೋಕದಲ್ಲಿದ್ದಾರೆ. ಆ ಲೋಕದಲ್ಲೇ ವಿಹಾರ ಮಾಡಲಿ. ನನ್ನ ಕೆಲಸ ನಾನು ಮಾಡುತ್ತೇನೆ ಎಂದು ಹೇಳಿದ್ದಾರೆ.
ಅತೃಪ್ತರು ಶಾಸಕರು ಅಧಿವೇಶನಕ್ಕೆ ಹಾಜರಾಗುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ನಾಳೆ ಎಲ್ಲಾ ಮಾಹಿತಿ ದೊರೆಯುತ್ತದೆ. ರಿವರ್ಸ್ ಆಪರೇಷನ್ ಮಾಡುವ ಅವಶ್ಯಕತೆ ನನಗಿಲ್ಲ. ನಾಡಿನಲ್ಲಿ ಉತ್ತಮ ಆಡಳಿತ ನಡೆಸುವ ನಿಟ್ಟಿನಲ್ಲಿ ನಾನು ಹೊರಟಿದ್ದೇನೆ. ರಥ ಎಳೆಯುವುದಕ್ಕೆ ಗೊದಮಟ್ಟೆ ಕೊಡುವಂತೆ ಒಳ್ಳೆ ಕೆಲಸ ಮಾಡುವುದಕ್ಕೆ ಬಿಜೆಪಿ ಅಡ್ಡಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದ್ಯಾವುದೂ ಬಿಜೆಪಿಯವರಿಗೆ ಉಪಯೋಗಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.