ನಾಳೆಯಿಂದ ಪರದೆ ಒಪನ್ ಆಗುತ್ತದೆ. ನಿಮಗೆ ಎಲ್ಲಾ ಮಾಹಿತಿ ಸಿಗುತ್ತದೆ-ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 6 ಫೆಬ್ರವರಿ 2019 (06:51 IST)
ಬೆಂಗಳೂರು : ನಾಳೆಯಿಂದ ಪರದೆ ಒಪನ್ ಆಗುತ್ತದೆ. ನಿಮಗೆ ಎಲ್ಲಾ ಮಾಹಿತಿ ಸಿಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಕುತೂಹಲಕಾರಿ  ಹೇಳಿಕೆಯೊಂದನ್ನು ನೀಡಿದ್ದಾರೆ.


ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಸರ್ಕಾರ ಸುಭದ್ರವಾಗಿದೆ. ನಾನು ಉತ್ತಮ ಬಜೆಟ್ ಮಂಡನೆ ಮಾಡುತ್ತೇನೆ. ಬಿಜೆಪಿಯವರ ಹೇಳಿಕೆಗೆ ಉತ್ತರ ಕೊಡುವುದು ಅನಾವಶ್ಯಕ. ಉತ್ತರ ಕೊಡುವ ವಿಷಯವೇ ಅದು ಅಲ್ಲ. ಬಿಜೆಪಿಯವರು ಯಾವುದೋ ಲೋಕದಲ್ಲಿದ್ದಾರೆ. ಆ ಲೋಕದಲ್ಲೇ ವಿಹಾರ ಮಾಡಲಿ. ನನ್ನ ಕೆಲಸ ನಾನು ಮಾಡುತ್ತೇನೆ ಎಂದು ಹೇಳಿದ್ದಾರೆ.  


ಅತೃಪ್ತರು ಶಾಸಕರು ಅಧಿವೇಶನಕ್ಕೆ ಹಾಜರಾಗುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ನಾಳೆ ಎಲ್ಲಾ ಮಾಹಿತಿ ದೊರೆಯುತ್ತದೆ. ರಿವರ್ಸ್ ಆಪರೇಷನ್ ಮಾಡುವ ಅವಶ್ಯಕತೆ ನನಗಿಲ್ಲ. ನಾಡಿನಲ್ಲಿ ಉತ್ತಮ ಆಡಳಿತ ನಡೆಸುವ ನಿಟ್ಟಿನಲ್ಲಿ ನಾನು ಹೊರಟಿದ್ದೇನೆ. ರಥ ಎಳೆಯುವುದಕ್ಕೆ ಗೊದಮಟ್ಟೆ ಕೊಡುವಂತೆ ಒಳ್ಳೆ ಕೆಲಸ ಮಾಡುವುದಕ್ಕೆ ಬಿಜೆಪಿ ಅಡ್ಡಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದ್ಯಾವುದೂ ಬಿಜೆಪಿಯವರಿಗೆ ಉಪಯೋಗಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮುಂದಿನ ಸುದ್ದಿ
Show comments