Select Your Language

Notifications

webdunia
webdunia
webdunia
webdunia

ಮುಖ್ಯ ಆಯುಕ್ತರು, ರವರಿಂದ ಮತದಾರರ ಪಟ್ಟಿ ಪರಿಶೀಲನೆ

Scrutiny of Electoral Roll by Chief Commissioner
bangalore , ಸೋಮವಾರ, 19 ಡಿಸೆಂಬರ್ 2022 (20:32 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಸೇರ್ಪಡೆ ರದ್ದತಿಮತ್ತು ಮಾರ್ಪಾಡುಮಾಡಲಾದ ಮತದಾರರ ಪಟ್ಟಿಯ ಮನೆ ಮನೆ ಪರಿಶೀಲನಾ ಕಾರ್ಯ ನಡೆಸಿದ್ದು, ಈ ಪೈಕಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸಂಬಂಧಪಟ್ಟ ಅಧಿಕಾರಿಗಳ ಜೊತೆ ರಾಜಾಜಿನಗರ ಹಾಗೂ ಯಶವಂತಪುರ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನೀಡಿ ನಮೂನೆಗಳ ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯ ಆಯುಕ್ತರು, ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಯುತ್ತಿದೆ. ಮತದಾರರಿಗೆ ಮಾಹಿತಿ ನೀಡಲಾಗುತ್ತಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲೂ ಖುದ್ದಾಗಿ 10 ಮನೆ ಗಳಿಗೆ ಭೇಟಿ ನೀಡಿ ಪರಿಶೀಲಿಸುವ ಹಾಗೂ ಕಛೇರಿಯಲ್ಲಿ 52 ನಮೂನೆಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ವಿರುದ್ದ ಕಿಡಿ ಕಾರುತ್ತಿರುವ ಸರ್ಕಾರಿ ನೌಕರರು