Webdunia - Bharat's app for daily news and videos

Install App

ಕಾಫಿ ಡೇಗೆ ₹26 ಕೋಟಿ ದಂಡ ವಿಧಿಸಿದ ಸೆಬಿ

Webdunia
ಗುರುವಾರ, 26 ಜನವರಿ 2023 (15:22 IST)
ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ್‌ ಸಾವಿನ ಬಳಿಕ ಈಗಷ್ಟೇ ಸಾಲದ ಸುಳಿಯಿಂದ ಹೊರಬರುತ್ತಿರುವ ಕಾಫಿ ಡೇ ಎಂಟರ್‌ಪ್ರೈಸಸ್‌ ಲಿಮಿಟೆಡ್​​​​ಗೆ ಸೆಬಿ ಭಾರೀ ಮೊತ್ತದ ದಂಡ ವಿಧಿಸಿದೆ. ಹಣವನ್ನು ಬೇರೆಡೆಗೆ ವರ್ಗಾಯಿಸಿದ ಆರೋಪದ ಮೇಲೆ ಈ ದಂಡ ವಿಧಿಸಲಾಗಿದೆ. ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾಗಿರುವ ಸೆಕ್ಯೂರಿಟೀಸ್‌ ಆಂಡ್‌ ಎಕ್ಸ್‌ಚೇಂಜ್‌ ಬೋರ್ಡ್‌ ಆಫ್‌ ಇಂಡಿಯಾ (ಸೆಬಿ) ಕಾಫಿ ಡೇ ಎಂಟರ್‌ಪ್ರೈಸಸ್‌ಗೆ 26 ಕೋಟಿ ರೂ. (3.2 ಮಿಲಿಯನ್ ಡಾಲರ್‌) ದಂಡವನ್ನು ವಿಧಿಸಿದೆ ಎಂದು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಆದೇಶದಲ್ಲಿ ಹೇಳಲಾಗಿದೆ. ಸೆಬಿಯ ತನಿಖೆಯಲ್ಲಿ 3,535 ಕೋಟಿ ರೂ. ಮೊತ್ತದ ಹಣವನ್ನು ಕಾಫಿ ಡೇ ಎಂಟರ್‌ಪ್ರೈಸಸ್‌ನ 7 ಅಂಗಸಂಸ್ಥೆಗಳಿಂದ ಸಂಸ್ಥೆಯ ಮಾಲೀಕರಿಗೆ ಸಂಬಂಧಿಸಿದ ಒಂದು ಕಂಪನಿಯಾದ ಮೈಸೂರು ಅಮಲ್ಗಮೇಟೆಡ್ ಕಾಫಿ ಎಸ್ಟೇಟ್ಸ್ ಲಿಮಿಟೆಡ್ ಗೆ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments