Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ನಾಳೆ ಎರಡನೇ ಹಂತದ ಮತದಾನ: ಕಣದಲ್ಲಿದ್ದಾರೆ ಘಟಾನುಘಟಿ ಅಭ್ಯರ್ಥಿಗಳು

Voting

Sampriya

ಬೆಂಗಳೂರು , ಸೋಮವಾರ, 6 ಮೇ 2024 (14:20 IST)
Photo Courtesy X
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಹಕ್ಕು ಚಲಾವಣೆ ನಡೆಯಲಿದೆ. ಭಾರತದಲ್ಲಿ ಇದು ಮೂರನೇ ಹಂತದ ಮತದಾನವಾಗಿದ್ದು, 11 ರಾಜ್ಯಗಳ 92 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ‌ಚಿಕ್ಕೋಡಿ, ದಾವಣಗೆರೆ, ಧಾರವಾಡ, ಹಾವೇರಿ, ಕೊಪ್ಪಳ, ಗುಲ್ಬರ್ಗ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6ರ ವರೆಗೆ ನಡೆಯಲಿದೆ.  

ಕರ್ನಾಟಕದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಮಾಜಿ ಸಿಎಂಗಳಾದ ಜಗದೀಶ ಶೆಟ್ಟರ್‌, ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರ ಮಕ್ಕಳು, ಸಂಬಂಧಿಕರು, ಹಾಲಿ ಸಂಸದರು ಕಣದಲ್ಲಿದ್ದಾರೆ.

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಶೇಕಡಾ 69.56 ರಷ್ಟು ಮತದಾನವಾಗಿತ್ತು. ಮಂಡ್ಯದಲ್ಲಿ (ಶೇ 81.67) ಅಧಿಕ ಮತದಾನವಾಗಿತ್ತು.
ಜೂನ್ 1ರಂದು ದೇಶದಲ್ಲಿ ಅಂತಿಮ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಂಚಿಯಲ್ಲಿ ಇಡಿ ದಾಳಿ: ಜಾರ್ಖಂಡ್ ಸಚಿವರ ಕಾರ್ಯದರ್ಶಿ ಬಳಿ ₹25 ಕೋಟಿ ನಗದು ಪತ್ತೆ