Select Your Language

Notifications

webdunia
webdunia
webdunia
webdunia

ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: 7.10 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

Second PUC Result, Education Minister Madhu Bangarappa, Undergraduate Department
Photo Credit X
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಏಪ್ರಿಲ್‌ 9 ರಂದು (ಗುರುವಾರ) ಬೆಳಗ್ಗೆ ಫಲಿತಾಂಶ ಪ್ರಕಟವಾಗಲಿದೆ. 

ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೂ PUC ಪರೀಕ್ಷೆ ನಡೆದಿತ್ತು. ಒಟ್ಟು ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

ಇಂದು ಫಲಿತಾಂಶ ಪ್ರಕಟವಾಗಬೇಕಿತ್ತು‌‌‌ ಕಾರಣವೇ ಇಲ್ಲದೇ ಬೋರ್ಡ್ ಫಲಿತಾಂಶ ಪ್ರಕಟ ಮುಂದೂಡಿಕೆ ಮಾಡಿತ್ತು. ಈ ಬೆನ್ನಲ್ಲೇ ಫಲಿತಾಂಶ ಪ್ರಕಟಿಸಲು ಅಂತಿಮ ದಿನಾಂಕವನ್ನೂ ಬಿಡುಗಡೆ ಮಾಡಿದೆ.

ಏಪ್ರಿಲ್ 9ರ ಬೆಳಗ್ಗೆ ಶಿಕ್ಷಣ ಸಚಿವರು ನಡೆಸುವ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ನಂತ್ರ ಇಲಾಖೆ ವೆಬ್‌ಸೈಟ್‌ ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಅಂತ ಎಕ್ಸಾಂ ಬೋರ್ಡ್ ಮೂಲಗಳು ಮಾಹಿತಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

2ಎ ಮೀಸಲಾತಿ ರಾಜಕೀಯಕ್ಕೆ ಬಳಸಿಕೊಂಡ ಕಾಂಗ್ರೆಸ್: ಮುರುಗೇಶ್ ನಿರಾಣಿ