ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಭಾನುವಾರ, 22 ಮಾರ್ಚ್ 2020 (10:03 IST)
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯವಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಹಾಗೇ ಕೊರೊನಾ ಬಗ್ಗೆ ಹರಡಿಸಿದ ಸುಳ್ಳುಸುದ್ದಿವೊಂದರ ಬಗ್ಗೆ ಮಾತನಾಡಿದ ಅವರು,  ವಿಮಾನದಲ್ಲಿ ಯಾವುದೇ ಪೌಡರ್ ಸ್ಪ್ರೇ ಮಾಡುವುದಿಲ್ಲ. ಪೌಡರ್ ಸ್ಪ್ರೇ ಮಾಡುತ್ತಾರೆಂಬುವುದು ಸುಳ್ಳುಸುದ್ದಿ. ಈ ಸುಳ್ಳುಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.


ಅಲ್ಲದೇ ಹೋಂ ಕ್ವಾರಂಟೈನ್ ನಲ್ಲಿರಬೇಕಾಗಿದ್ದ ವ್ಯಕ್ತಿ ಓಡಾಟ ವಿಚಾರಕ್ಕೆ ಸಂಬಂಧಿಸಿದಂತೆ  ಆತನನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಧಾರವಾಡದಲ್ಲಿ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆ; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ