Select Your Language

Notifications

webdunia
webdunia
webdunia
webdunia

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ
bangalore , ಮಂಗಳವಾರ, 8 ಮಾರ್ಚ್ 2022 (19:23 IST)
ಪದವಿ ಪೂರ್ವ ಶಿಕ್ಷಣ ಮಂಡಳಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ(2nd PUC Final Time Table) ಪ್ರಕಟವಾಗಿದೆ. ಪದವಿ ಪೂರ್ವ ಶಿಕ್ಷಣ ಮಂಡಳಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
 
ಈ ಹಿಂದೆ ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿರುವ ಬಗ್ಗೆ ಪದವಿಪೂರ್ವ ಶಿಕ್ಷಣ ಮಂಡಳಿ ಘೋಷಣೆ ಮಾಡಿತ್ತು. ಆದ್ರೆ ದ್ವಿತೀಯ PU ಪರೀಕ್ಷೆ ಸಂದರ್ಭದಲ್ಲಿ JEE ಮುಖ್ಯ ಪರೀಕ್ಷೆ ಹಿನ್ನೆಲೆ ಪರಿಷ್ಕೃತ ವೇಳಾಪಟ್ಟಿ ಸಿದ್ಧ ಮಾಡಲಾಗಿದೆ. ಸದ್ಯ ಏಪ್ರಿಲ್ 22ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ದಿನಾಂಕ ಘೋಷಿಸಿದೆ. ಈ ಹಿಂದೆ ವೇಳಾಪಟ್ಟಿಯ ಬಗ್ಗೆ ಅಕ್ಷೇಪಣೆ ಸಲಿಸಲು ಮಾರ್ಚ್ 5 ಸಂಜೆ 5 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು. ಸದ್ಯ ಯಾವುದೇ ಅಕ್ಷೇಪಣೆಗಳಿಲ್ಲದ ಕಾರಣ ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ
ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ
ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ
ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ
ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ
ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ
ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ
ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ
ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ
ಮೇ 17ರಂದು ಹೋಮ್ ಸೈನ್ಸ್, ಮೇ 18ರಂದು ಹಿಂದಿ ಪರೀಕ್ಷೆ

Share this Story:

Follow Webdunia kannada

ಮುಂದಿನ ಸುದ್ದಿ

ಮೀರಿ ನಿಲ್ಲಲಿ ಬದುಕು ಭ್ರಮೆಯ ಕಡಿವಾಣಗಳ ಮೀರಿ