Select Your Language

Notifications

webdunia
webdunia
webdunia
webdunia

ಕೊರೊನಾಗೆ ದೇಶದಲ್ಲಿ ಮೊದಲ ಸಾವು ಕಂಡ ಕಲಬುರಗಿಯಲ್ಲಿ 144 ಸೆಕ್ಷನ್ ಜಾರಿ

ಕೊರೊನಾಗೆ ದೇಶದಲ್ಲಿ ಮೊದಲ ಸಾವು ಕಂಡ ಕಲಬುರಗಿಯಲ್ಲಿ 144 ಸೆಕ್ಷನ್ ಜಾರಿ
ಕಲಬುರಗಿ , ಗುರುವಾರ, 19 ಮಾರ್ಚ್ 2020 (20:36 IST)
ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಕಲಬುರಗಿ ಜಿಲ್ಲಾಡಳಿತ ಮುಂದಾಗಿದೆ.

 ಮಾರ್ಚ್ 19ರ ರಾತ್ರಿ 8 ಗಂಟೆಯಿಂದ ಮಾರ್ಚ್ 22ರ ರಾತ್ರಿ 8 ಗಂಟೆಯವರೆಗೆ ಮೂರು ದಿನಗಳ ಕಾಲ ಕಲಬುರಗಿ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಕೊರೋನಾ ಸೊಂಕಿನಿಂದ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದರಿಂದ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ ಮತ್ತು ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದು, ಅಗತ್ಯ ಸೇವೆಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾದಿಂದಾಗಿ ಕೆ ಎಸ್ ಆರ್ ಟಿ ಸಿಗೆ ಕೋಟಿ ಕೋಟಿ ನಷ್ಟ