ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಭೇಟಿ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ವರಿಷ್ಠರು ಕರ್ನಾಟಕದ ರಾಜಕೀಯ ಪರಿಸ್ಥಿತಿ ಬಗ್ಗೆ ಕೇಳಿ ತಿಳಿದುಕೊಂಡಿದ್ದಾರೆ.ಅಗತ್ಯ ಬಿದ್ರೆ ಮತ್ತೆ ಫೋನ್ ಮಾಡ್ತೀನಿ ಅಂತಾ ಹೇಳಿದ್ದಾರೆ. ವಿಪಕ್ಷ ನಾಯಕರ ಆಯ್ಕೆಗಾಗಿ ಇಬ್ಬರು ವೀಕ್ಷಕರನ್ನು ಕಳಿಸಲು ನಿರ್ಧಾರ ಮಾಡಲಾಗಿದೆ.ಮನ್ಸೂಕ್ ಮಾಂಡ್ಯವ್ಯ ಮತ್ತು ವಿನೋದ್ ತಾವ್ಡೆ ಬೆಂಗಳೂರಿಗೆ ಬರಲಿದ್ದಾರೆ.. ವೀಕ್ಷಕರು ಶಾಸಕರ ಅಭಿಪ್ರಾಯ ತಿಳಿದು ನಂತರ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದರು. ಇನ್ನು ನಾಳಿನ ವಿಧಾನಸಭೆ ಅಧಿವೇಶನದಲ್ಲಿ ವಿಪಕ್ಷ ನಾಯಕರು ಇರುವುದಿಲ್ಲ.. ವೀಕ್ಷಕರು ಕೊಡುವ ವರದಿ ಆಧಾರದ ಮೇಲೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುವುದು. ಬಹುಶಃ ಎರಡು ದಿನಗಳ ಬಳಿಕ ವಿಪಕ್ಷ ನಾಯಕರ ಆಯ್ಕೆ ಆಗಲಿದೆ ಎಂದರು