Select Your Language

Notifications

webdunia
webdunia
webdunia
webdunia

ಸಂತಾನೋತ್ಪತ್ತಿ ಆಯ್ಕೆ ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗ

ಸಂತಾನೋತ್ಪತ್ತಿ ಆಯ್ಕೆ ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗ
bangalore , ಶನಿವಾರ, 27 ನವೆಂಬರ್ 2021 (20:36 IST)
ಬೆಂಗಳೂರು: ಸಂತಾನೋತ್ಪತ್ತಿ ಆಯ್ಕೆ ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಆದ್ದರಿಂದ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಸಂತ್ರಸ್ತೆಯ ಗರ್ಭಪಾತಕ್ಕೆ ಸಮ್ಮತಿ ನೀಡಲಾಗಿದೆ ಎಂದು  ಹೈಕೋರ್ಟ್ ಆದೇಶಿಸಿದೆ.
ಅತ್ಯಾಚಾರದ ಪರಿಣಾಮವಾಗಿ ಗರ್ಭ ಧರಿಸಿದ್ದ 16 ವರ್ಷದ ಅಪ್ರಾಪ್ತೆ ಗರ್ಭಪಾತಕ್ಕೆ ಅನುಮತಿಸದ ವೈದ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಎಸ್ ಸಂಜಯಗೌಡ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ವೈದ್ಯಕೀಯ ಗರ್ಭಪಾತ ಕಾಯಿದೆ 1971ರ ಸೆಕ್ಷನ್ 3ರ ಅಡಿ ಗರ್ಭ ಧರಿಸಿ 24 ವಾರಗಳು ಪೂರ್ಣಗೊಂಡಿದ್ದರೆ ಗರ್ಭಪಾತ ಮಾಡಲಾಗದು ಎಂದು ವೈದ್ಯಕೀಯ ಅಧಿಕಾರಿ ತಿಳಿಸಿದ್ದರು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಒಲ್ಲದ ಭ್ರೂಣವನ್ನು ತೆಗೆಸಲು ಅನುಮತಿ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಳು.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಕದ ತಮಿಳುನಾಡಿಗೆ ರೆಡ್ ಅಲಟ್೯