Select Your Language

Notifications

webdunia
webdunia
webdunia
webdunia

ತಂತ್ರಜ್ಞರು ಹಾಗೂ ಕಲಾವಿದರ ಆಯ್ಕೆ: ಕೂಡಲೇ ಅರ್ಜಿ ಸಲ್ಲಿಸಿ

ತಂತ್ರಜ್ಞರು ಹಾಗೂ ಕಲಾವಿದರ ಆಯ್ಕೆ: ಕೂಡಲೇ ಅರ್ಜಿ ಸಲ್ಲಿಸಿ
ಕಲಬುರಗಿ , ಗುರುವಾರ, 19 ಮಾರ್ಚ್ 2020 (16:11 IST)
ರಂಗಾಯಣದಿಂದ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲಬುರಗಿ ರಂಗಾಯಣದಿಂದ ಹೊರಗುತ್ತಿಗೆ ಆಧಾರದ ಮೇಲೆ ಮೂರು ವರ್ಷಗಳ ಅವಧಿಗೆ 03 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ಆಯ್ಕ್ಕೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಆಸಕ್ತ ಕಲಾವಿದರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು 2020ರ ಏಪ್ರಿಲ್ 15ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ರಂಗಾಯಣ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ರಂಗಾಯಣದ www.rangayanakalaburagi.com ವೆಬ್‍ಸೈಟ್‍ದಿಂದ ಡೌನ್‍ಲೋಡ್ ಮಾಡಿಕೊಳ್ಳಬೇಕು ಅಥವಾ ಅಯಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬೇಕು.  ಭರ್ತಿ ಮಾಡಿದ ಅರ್ಜಿಯನ್ನು 2020ರ ಏಪ್ರಿಲ್ 15ರ ಮಧ್ಯಾಹ್ನ 1 ಗಂಟೆಯೊಳಗಾಗಿ   ಆಡಳಿತಾಧಿಕಾರಿಗಳು, ರಂಗಾಯಣ, ಡಾ. ಸಿದ್ಧಯ್ಯ ಪುರಾಣಿಕ ಸುವರ್ಣ ಸಾಂಸ್ಕೃತಿಕ ಸಮುಚ್ಛಯ, ಸೇಡಂ-ಶಹಾಬಾದ ವರ್ತುಲ ರಸ್ತೆ, ಕಲಬುರಗಿ-585105 ವಿಳಾಸಕ್ಕೆ ಅಂಚೆ ಮೂಲಕ ಅಥವಾ [email protected],  [email protected] ಇ-ಮೇಲ್ ವಿಳಾಸ ಕಳುಹಿಸಬೇಕು. 

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ರಂಗಾಯಣ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ  08472-227735ಗೆ ಕಚೇರಿ ವೇಳೆಯಲ್ಲಿ  ಸಂಪರ್ಕಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2020ರ ಮಾರ್ಚ್ 20ರಂದು ನಿಗದಿಪಡಿಸಲಾಗಿತ್ತೆಂದು ಅವರು ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಎಫೆಕ್ಟ್ ; ರೈಲ್ವೆ ಇಲಾಖೆಗೆ 500 ಕೋಟಿ ನಷ್ಟ?