Select Your Language

Notifications

webdunia
webdunia
webdunia
webdunia

ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಂ ಪ್ರೇರಿತ ದೂರು!

ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಂ ಪ್ರೇರಿತ ದೂರು!
ದಕ್ಷಿಣ ಕನ್ನಡ , ಶುಕ್ರವಾರ, 6 ಜನವರಿ 2017 (07:40 IST)
ವೈದ್ಯರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಂ ಪ್ರೇರಿತ ದೂರು ದಾಖಲಾಗಿದೆ. 
ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ನಿನ್ನೆ ತಡರಾತ್ರಿ ಸಂಸದರ ವಿರುದ್ಧ ಸ್ವಂ ಪ್ರೇರಿತ ದೂರು ದಾಖಲಾಗಿದೆ. 
 
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಸಂಸದರು ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇತರ ರೋಗಿಗಳನ್ನು ವೈದ್ಯರು ಪರಿಶೀಲಿಸುತ್ತಿದ್ದರು. ಹೀಗಾಗಿ ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. 
 
ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇಬ್ಬರೂ ವೈದ್ಯರಿಗೆ ರಕ್ತ ಬರುವಂತೆ ಹಲ್ಲೆ ಮಾಡಲಾಗಿದೆ. ಆದರೆ, ಈ ಕೂರಿತು ಯಾವುದೇ ದೂರು ದಾಖಲಾಗಿರಲಿಲ್ಲ. ಆದರೆ, ನಿನ್ನೆ ತಡರಾತ್ರಿ ಸಂಸದರ ವಿರುದ್ಧ ಸ್ವಂ ಪ್ರೇರಿತ ದೂರು ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಮಾತು ಕೇಳದಿದ್ರೆ ಸಿಎಂ ರಾಜಕೀಯ ಭವಿಷ್ಯ ಅಂತ್ಯ: ಪೂಜಾರಿ