Webdunia - Bharat's app for daily news and videos

Install App

ರಾಜ್ಯಾಧ್ಯಂತ ಇಂದು ಉದ್ಘಾಟನೆಯಾಗಬೇಕಿದ್ದ 'ಓಬವ್ವ ಆತ್ಮರಕ್ಷಣೆ ಕಲೆ ತರಬೇತಿ'ಮುಂದೂಡಿಕೆ

Webdunia
ಸೋಮವಾರ, 7 ಫೆಬ್ರವರಿ 2022 (21:05 IST)
ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಹಿಳೆಯರ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿಗೆ ಚಾಲನೆ ನೀಡಿದ್ದರು. ಇಂದು ರಾಜ್ಯಾಧ್ಯಂತ ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳುವಂತೆ ದಿನಾಂಕ ನಿಗದಿಪಡಿಸಲಾಗಿದೆ. ಆದ್ರೇ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನದ ಹಿನ್ನಲೆಯಲ್ಲಿ ಎರಡು ದಿನ ಶೋಕಾಚರಣೆ ರಾಜ್ಯಾಧ್ಯಂತ ಘೋಷಣೆ ಮಾಡಿದೆ.
ಈ ಹಿನ್ನಲೆಯಲ್ಲಿ ಇಂದು ಉದ್ಘಾಟನೆಗೊಳ್ಳಬೇಕದ್ದಂತ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿ ಕಾರ್ಯಕ್ರಮ ಫೆಬ್ರವರಿ 8ರ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಇಂದು ಫೆ.7 ರಂದು ನಡೆಯಬೇಕಿದ್ದ ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ಉದ್ಘಾಟನಾ ಸಮಾರಂಭವನ್ನು ಗಾಯಕಿ ಲತಾ ಮಂಗೇಶ್ಕರ್ ನಿಧನದ ಶೋಕಾಚರಣೆ ಹಿನ್ನೆಲೆಯಲ್ಲಿ ಫೆಬ್ರವರಿ 8 ಮಂಗಳವಾರಕ್ಕೆ ಮುಂದೂಡಲಾಗಿದೆ. ಅಂದು ಬೆಳಿಗ್ಗೆ 11-30 ಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳು,ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ಉಪಸ್ಥಿತಿಯಲ್ಲಿ, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ ಉದ್ಘಾಟಿಸುವರು.
ವಿಶೇಷ ಅತಿಥಿಗಳು ಸಮಾಜ ಕಲ್ಯಾಣ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಪೂಜಾರಿ, ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪಾಲ್ಗೊಳ್ಳುವರು.
ಹುಬ್ಬಳ್ಳಿ ಧಾರವಾಡ ಪಶ್ಚಿಮ ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ-ಮಂಡಳಿಗಳ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments