Publish Date: Sun, 27 Nov 2022 (14:04 IST)
Updated Date: Sun, 27 Nov 2022 (13:51 IST)
ಬೆಳಗಾವಿ : ಕರ್ನಾಟಕ ಮಹಾರಾಷ್ಟ್ರದ ಗಡಿಭಾಗದಲ್ಲಿರುವ ಕಿತವಾಡ ಫಾಲ್ಸ್ನಲ್ಲಿ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರು ಸಾವನ್ನಪ್ಪಿದ್ದಾರೆ.
ಇಲ್ಲಿನ ಉಜ್ವಲ್ ನಗರ ಆಸೀಯಾ ಮುಜಾವರ್ (17), ಅನಗೋಳದ ಕುದ್ಶೀಯಾ ಹಾಸ್ಂ ಪಟೇಲ್(20), ಝಟ್ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20) ಹಾಗೂ ತಸ್ಮಿಯಾ(20) ಸಾವನ್ನಪ್ಪಿದ್ದಾರೆ.
ಬೆಳಗಾವಿಯಿಂದ ಕಿತವಾಡ ಫಾಲ್ಸ್ಗೆ 40 ಯುವತಿಯರು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸೆಲ್ಫಿ ತಗೆದುಕೊಳ್ಳುವ ವೇಳೆ ಐವರು ಯುವತಿಯರು ಕಾಲು ಜಾರಿ ಬಿದ್ದಿದ್ದಾರೆ. ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ.