Select Your Language

Notifications

webdunia
webdunia
webdunia
webdunia

ನಮ್ಮ ಮೆಟ್ರೊ ನಿಲ್ದಾಣಗಳಲ್ಲಿ ಸೆಲ್ಫಿ ಪಾಯಿಂಟ್ ಗಳ ನಿರ್ಮಾಣ

Namma Metro

Bindu

ಬೆಂಗಳೂರು , ಬುಧವಾರ, 21 ಫೆಬ್ರವರಿ 2024 (14:11 IST)
ಬೆಂಗಳೂರು: ನಮ್ಮ ಮೆಟ್ರೋ ಬೆಂಗಳೂರು ನಗರದಲ್ಲಿ,  ಅತ್ಯಂತ ವೇಗದ ಸಾರ್ವಜನಿಕ ಸಂಪರ್ಕ ಸಾರಿಗೆಯಾಗಿದೆ. ಪ್ರತಿದಿನ ಲಕ್ಷಾಂತರ ಜನರು ಮೆಟ್ರೋದಲ್ಲಿ ಸಂಚರಿಸುತ್ತಾರೆ.

ಇದೀಗ ಮೆಟ್ರೋ ಸೆಲ್ಫಿ ಪ್ರಿಯ ಪ್ರಯಾಣಿಕರಿಗಾಗಿ,  ಮೆಟ್ರೊ ನಿಲ್ದಾಣಗಳಲ್ಲಿ ಸೆಲ್ಫಿ ಪಾಯಿಂಟ್ಗಳನ್ನು ನಿರ್ಮಾಣ ಮಾಡಿದೆ. ನಮ್ಮ ಮೆಟ್ರೋ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ  ನಿಲ್ದಾಣಗಳಲ್ಲಿ,  ಸೆಲ್ಫಿ ಪಾಯಿಂಟ್ಗಳನ್ನು ನಿರ್ಮಿಸಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸೆಲ್ಫಿ ಪಾಯಿಂಟ್ಗಳನ್ನು ನಿರ್ಮಾಣ ಮಾಡಿದೆ.

ಗೋಡೆಯ ಮೇಲೆ ಹಸಿರು ಹೊದಿಕೆಯಂತೆ ಕಾಣುವ ಬೋರ್ಡ್ ರೀತಿಯ ಪರದೆ ಹಾಕಿ, ಅದರ ಸುತ್ತಲೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಮೊಬೈಲ್‌ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸೆಲ್ಫಿ ಪಾಯಿಂಟ್ಗಾಗಿ ಹೆಚ್ಚು ಸ್ಥಳ ಮೀಸಲು ಇಡಲಾಗಿದೆ. ಇದನ್ನು ನೋಡಿ ಪ್ರಯಾಣಿಕರು ಖುಷ್ ಆಗುತ್ತಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ರಾಜ್ಯ ಸರ್ಕಾರದ ಹೊಸ ವಿವಾದ