Select Your Language

Notifications

webdunia
webdunia
webdunia
webdunia

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಈಶ್ವರ ಖಂಡ್ರೆ

Sampriya

ಬೆಂಗಳೂರು , ಗುರುವಾರ, 22 ಮೇ 2025 (20:19 IST)
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಕೆಲವು ಪ್ರವಾಸಿಗರು ಆನೆಯ ಜತೆ ಸೆಲ್ಫಿ ತೆಗೆಯುವ ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಇಂತವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.

ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಗುರುವಾರ ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಅರಣ್ಯ ಮಾರ್ಗದಲ್ಲಿ ಸಂಚರಿಸುವಾಗ ವಾಹನಗಳಿಂದ ಕೆಳಗೆ ಇಳಿಯುವುದು ಅಪರಾಧವಾಗಿದ್ದು, ಆ ವಾಹನದ ನೋಂದಣಿ ಸಂಖ್ಯೆ ಪತ್ತೆ ಮಾಡಿ, ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ