Publish Date: Mon, 29 Nov 2021 (20:44 IST)
Updated Date: Mon, 29 Nov 2021 (20:47 IST)
ವಿದೇಶಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನು ತರಿಸಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಡಿನೋಜಾರ್ಜ್ ಹಾಗೂ ಗೋಕುಲ್ ಬಂಧಿತರು. ಆರೋಪಿಗಳಿಂದ 30 ಲಕ್ಷ ರೂ. ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್, ಚರಸ್ ಮತ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ತಿಳಿಸಿದರು.
ಆರೋಪಿಗಳಿಬ್ಬರು ನೂಜೀರಿಯಾ ದೇಶದ ಡ್ರಗ್ ಪೆಡ್ಲರ್‍ನಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ತರಿಸಿಕೊಂಡು ನಗರದ ಟೆಕ್ಕಿಗಳು, ಪ್ರತಿಷ್ಠಿತ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹಾಗೂ ಕೆಲ ಉದ್ಯಮಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅದೇ ರೀತಿ ಭಾನುವಾರ (ಸೆ.28)ರಂದು ಎಲೆಕ್ಟ್ರಾನಿಕ್ ಸಿಟಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂಡಿಎಂಎ ಕ್ರಿಸ್ಟೆಲ್, ಚರಸ್, ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸದ್ಯ ಆರೋಪಿಗಳ ವಿರುದ್ಧ ಎನ್‍ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೆÇಲೀಸರು ತಿಳಿಸಿದರು.