Webdunia - Bharat's app for daily news and videos

Install App

ವಿದೇಶಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನು ತರಿಸಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ

Webdunia
ಸೋಮವಾರ, 29 ನವೆಂಬರ್ 2021 (20:44 IST)
ವಿದೇಶಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನು ತರಿಸಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. 
ಕೇರಳ ಮೂಲದ ಡಿನೋಜಾರ್ಜ್ ಹಾಗೂ ಗೋಕುಲ್ ಬಂಧಿತರು. ಆರೋಪಿಗಳಿಂದ 30 ಲಕ್ಷ ರೂ. ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್, ಚರಸ್ ಮತ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ತಿಳಿಸಿದರು. 
ಆರೋಪಿಗಳಿಬ್ಬರು ನೂಜೀರಿಯಾ ದೇಶದ ಡ್ರಗ್ ಪೆಡ್ಲರ್‍ನಿಂದ ಕಡಿಮೆ ಬೆಲೆಗೆ ಮಾದಕ  ವಸ್ತುಗಳನ್ನು ತರಿಸಿಕೊಂಡು ನಗರದ ಟೆಕ್ಕಿಗಳು, ಪ್ರತಿಷ್ಠಿತ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹಾಗೂ ಕೆಲ ಉದ್ಯಮಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅದೇ ರೀತಿ ಭಾನುವಾರ (ಸೆ.28)ರಂದು ಎಲೆಕ್ಟ್ರಾನಿಕ್ ಸಿಟಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂಡಿಎಂಎ ಕ್ರಿಸ್ಟೆಲ್, ಚರಸ್, ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 
 ಸದ್ಯ ಆರೋಪಿಗಳ ವಿರುದ್ಧ ಎನ್‍ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೆÇಲೀಸರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ