Select Your Language

Notifications

webdunia
webdunia
webdunia
webdunia

ಲಂಚ ಪಡೆದ ಹಿರಿಯ ಅಧಿಕಾರಿಗಳು : ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದೇನು?

ಲಂಚ ಪಡೆದ ಹಿರಿಯ ಅಧಿಕಾರಿಗಳು : ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದೇನು?
ಬೆಂಗಳೂರು , ಶನಿವಾರ, 29 ಆಗಸ್ಟ್ 2020 (19:55 IST)
ಲಂಚ ಪಡೆದ ಆರೋಪದ ಮೇಲೆ ಮೂವರು ಅಧಿಕಾರಿಗಳನ್ನು ಅಮಾನತ್ ಮಾಡಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು  ಭೂ ಒಡೆಯತನ ಯೋಜನೆಯಲ್ಲಿ  ಲಂಚ ಪಡೆದ  ಆರೋಪದಡಿ ಭ್ರಷ್ಟಾಚಾರ  ನಿಗ್ರಹ ದಳವು (ಎಸಿಬಿ) ಬಂಧಿಸಿದೆ.

ಈ ಮೂವರು ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ  ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ನಿಗಮದ ಪ್ರಧಾನ ವ್ಯವಸ್ಥಾಪಕ  ಎಸ್.ಎಸ್. ನಾಗೇಶ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಮಂಜುಳ ಮತ್ತು ಕಚೇರಿ ಅಧೀಕ್ಷಕ ಪಿ.ಡಿ. ಸುಬ್ಬಪ್ಪ ಅವರು ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಆನ್ ಲೈನ್ ಮೀಟಿಂಗ್ ನಲ್ಲೇ ಲವ್ವಿ ಡವ್ವಿ ನಡೆಸಿ ಕೆಲಸ ಕಳೆದುಕೊಂಡ ಸರಕಾರಿ ಅಧಿಕಾರಿ