Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ಗೆ ಕುಮಾರ್ ಬಂಗಾರಪ್ಪ ಗುಡ್‌ಬೈ: ಮಾ.9 ರಂದು ಬಿಜೆಪಿ ಸೇರ್ಪಡೆ

ಕಾಂಗ್ರೆಸ್‌ಗೆ ಕುಮಾರ್ ಬಂಗಾರಪ್ಪ ಗುಡ್‌ಬೈ: ಮಾ.9 ರಂದು ಬಿಜೆಪಿ ಸೇರ್ಪಡೆ
ಶಿವಮೊಗ್ಗ , ಶುಕ್ರವಾರ, 3 ಮಾರ್ಚ್ 2017 (14:05 IST)
ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದು, ಮಾರ್ಚ್ 9 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಇಂದು ಸಂಜೆ ಕುಮಾರ್ ಬಂಗಾರಪ್ಪ ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ಗೆ ರವಾನಿಸಲಿದ್ದಾರೆ ಎನ್ನಲಾಗಿದೆ.
 
ರಾಜ್ಯದಲ್ಲಿ ಸುಭಧ್ರ ಸರಕಾರ ತರಲು ಅಭಿಮಾನಿಗಳು ಮತ್ತು ಆಪ್ತರೊಂದಿಗೆ ಚರ್ಚಿಸಿದ ನಂತರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ ಎಂದು ಕುಮಾರ ಬಂಗಾರಪ್ಪ ತಿಳಿಸಿದ್ದಾರೆ.
 
ಬಿಜೆಪಿ ಪಕ್ಷ ಸೇರಲು ಯಾವುದೇ ಷರತ್ತು ಹಾಕಿಲ್ಲ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕಾರ್ಯವೈಖರಿಗೆ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ತಿರುಪತಿ ತಿಮ್ಮಪ್ಪನಿಗೂ ನೋಟ್ ಬ್ಯಾನ್ ಬಿಸಿ ಮುಟ್ಟಿಸಿದ ಭಕ್ತರು