ತಾನು ಸರಿ ದಾರಿಯಲ್ಲಿ ಸಾಗುತ್ತಿದ್ದೇನೆಯೇ ಎಂದು ಆತ್ಮಾವಲೋಕನ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯಲಿ ಎಂದು ಮಾಜಿ ಕೇಂದ್ರ ಸಚಿವ ಜಾಫರ್ ಷರೀಪ್ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಃಪತನಗೊಳ್ಳುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಳ್ಳುವ ಸಮಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮರುಹುಟ್ಟು ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂದು ಮನಸಾಕ್ಷಿಯಿಂದ ಹೇಳಿಕೆ ನೀಡಲು ಸಾಧ್ಯವೆ? ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾವು ಸರಿ ದಾರಿಯಲ್ಲಿ ಸಾಗುತ್ತಿದ್ದೇನೆಯೇ ಎಂದು ಆತ್ಮವಲೋಕನ ಮಾಡಿಕೊಂಡು ಅಧಿಕಾರದಲ್ಲಿ ಮುಂದುವರೆಯ ಬೇಕಾಗಿದೆ ಎಂದು ಸಲಹೆ ನೀಡಿದರು.
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ಆರೋಪಗಳು ಬಂದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಮಾಜಿ ಕೇಂದ್ರ ಸಚಿವ ಜಾಫರ್ ಷರೀಪ್ ಮನವಿ ಮಾಡಿಕೊಂಡಿದ್ದಾರೆ.