Publish Date: Fri, 13 Nov 2020 (07:36 IST)
Updated Date: Fri, 13 Nov 2020 (07:38 IST)
ಬೆಂಗಳೂರು : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ (62) ಗುರುರಾತ್ರಿ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುರಾತ್ರಿ ರಾತ್ರಿ 12 ಗಂಟೆಗೆ ಹಾಯ್ ಬೆಂಗಳೂರು ಕಚೇರಿಯಲ್ಲಿದ್ದಾಗ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ರವಿಬೆಳೆಗರೆ ಅವರು ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಹಾಗೇ ಪತ್ರಿಕಾರಂಗದ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಜಗತ್ತಿನಲ್ಲಿ ನಡೆದ ಅಪರಾಧಗಳ ಬಗ್ಗೆ ಹಲವು ಪುಸ್ತಕಗಳನ್ನು ಬರೆದು ಅದನ್ನು ಜನರ ಮುಂದೆ ತೆರೆದಿಟ್ಟಿದ್ದರು.