ಲೋಕಸಭೆ ಹಿನ್ನಡೆಗೆ ಹಿರಿಯ ನಾಯಕ ಕೆಂಡ; ಕಾಂಗ್ರೆಸ್ ನಲ್ಲಿ ಹೆಚ್ಚಿದ ತಳಮಳ

Webdunia
ಮಂಗಳವಾರ, 4 ಜೂನ್ 2019 (19:18 IST)
ಲೋಕಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆಯಾದ ನಂತರ ಕಾಂಗ್ರೆಸ್ ವಿರುದ್ಧ ಪಕ್ಷದ ಹಿರಿಯ ನಾಯಕರು ಅಸಮಾಧಾನ ಹೊರಹಾಕುವುದು ಹೆಚ್ಚಾಗಿದೆ.

ಇದೀಗ ಇವರ ಸಾಲಿಗೆ ಮಾಜಿ ಸಚಿವ ರಾಮಲಿಂಗರೆಡ್ಡಿ ಕೂಡ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಮತ್ತೊಬ್ಬ ಹಿರಿಯ ನಾಯಕನಿಂದ ಪಕ್ಷ ಹಾಗೂ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತವಾಗಿದ್ದು, ದೂರದೃಷ್ಟಿ ಕೊರತೆ ಹಾಗೂ ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸಿದ್ದು, ತೀವ್ರ ಹಿನ್ನಡೆಗೆ ಕಾರಣ ಎಂದು ಬಣ್ಣಿಸಿದ್ದಾರೆ. ಜತೆಗೆ ಸಚಿವರ ವೈಫಲ್ಯ ಕೂಡ ಹಿನ್ನಡೆಗೆ ಕಾರಣ ಎನ್ನುವ ಮೂಲಕ ತಮಗಾದ ಅನ್ಯಾಯಕ್ಕೆ ಪ್ರತಿಕಾರ ತೀರಿಸಿಕೊಂಡಿದ್ದಾರೆ.

ರಾಮಲಿಂಗರೆಡ್ಡಿ ಟ್ವೀಟ್ಬಾಣ: ರಾಮಲಿಂಗರೆಡ್ಡಿ ತಮ್ಮ ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದು ಅವರು, “ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು’ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments