Webdunia - Bharat's app for daily news and videos

Install App

ವರಿಷ್ಠರು ಅಳೆದು ತೂಗಿ ತೀರ್ಮಾನ ಮಾಡ್ತಾರೆ

Webdunia
ಬುಧವಾರ, 17 ಮೇ 2023 (17:51 IST)
ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಮುಖ್ಯಮಂತ್ರಿ ಸ್ಥಾನ ಇಬ್ಬರ ನಡುವೆ ಹಂಚಿಕೆಯಾಗುತ್ತದೆ, ಈ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಆಪ್ತ, ಶಾಸಕ ಹೆಚ್​.ಸಿ ಮಹದೇವಪ್ಪ ಅಧಿಕಾರ ಹಂಚಿಕೆ ಕೇವಲ ಅಂತೆ ಕಂತೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ಅದೇ ಅಂತಿಮ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರೋದು ನನಗೆ ಖುಷಿ ತಂದಿದೆ. ಡಿಕೆ ಶಿವಕುಮಾರ್​ ಸೇರಿ ಅನೇಕ ನಾಯಕರು ಸಿಎಂ ಆಕಾಂಕ್ಷಿಗಳಾಗಿದ್ದಾರೆ. ಆದರೆ ಒಬ್ಬರಿಗೆ ಸಿಎಂ ಸ್ಥಾನ ಕೊಡಲು ಸಾಧ್ಯ. ವರಿಷ್ಠರು ಎಲ್ಲವನ್ನೂ ಅಳೆದು ತೂಗಿ ತೀರ್ಮಾನ ಮಾಡಿದ್ದಾರೆ. ಅವಲೋಕನದ ಬಳಿಕವೇ ಸಿದ್ದರಾಮಯ್ಯಗೆ ಹೊಣೆ ನೀಡಲಾಗಿದೆ. ಡಿಕೆ ಶಿವಕುಮಾರ್​ ಮುಖ್ಯಮಂತ್ರಿ ಆಗಬೇಕು ಅಂತ ಬಯಸುವುದರಲ್ಲಿ ತಪ್ಪಿಲ್ಲ. ಆದರೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments