ಅಮೃತಸರ (ಪಂಜಾಬ್): ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9 ರಂದು ಪಂಜಾಬ್‌ನ ಪ್ರವಾಹ ಪೀಡಿತ ಗುರುದಾಸ್‌ಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಂಜಾಬ್ ಬಿಜೆಪಿ ಭಾನುವಾರ ಪ್ರಕಟಿಸಿದೆ.
ಪಿಎಂ ಮೋದಿ ಅವರು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜನರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ.
"ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರು ಸೆ.9 ರಂದು ಪಂಜಾಬ್‌ನ ಗುರುದಾಸ್‌ಪುರಕ್ಕೆ ಆಗಮಿಸುತ್ತಿದ್ದಾರೆ. ಅವರು ಪ್ರವಾಹ ಪೀಡಿತ ಸಹೋದರ-ಸಹೋದರಿಯರು ಮತ್ತು ರೈತರೊಂದಿಗೆ ನೇರವಾಗಿ ಭೇಟಿಯಾಗಿ ಅವರ ದುಃಖವನ್ನು ಹಂಚಿಕೊಳ್ಳುತ್ತಾರೆ ಮತ್ತು ಸಂತ್ರಸ್ತರ ನೆರವಿಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ" ಎಂದು ಪಂಜಾಬ್ ಬಿಜೆಪಿ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಪ್ರಕಟಿಸಿದೆ.
ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ರಾಜ್ಯಕ್ಕೆ ಗರಿಷ್ಠ ನೆರವು ನೀಡಲು ಸ್ಥಳೀಯ ಪರಿಸ್ಥಿತಿಗಳನ್ನು ಮೌಲ್ಯಮಾಪನ ಮಾಡುತ್ತಾರೆ ಎಂದು ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನಿಲ್ ಜಾಕರ್ ಹೇಳಿದ್ದಾರೆ.