Publish Date: Mon, 24 Jul 2017 (14:08 IST)
Updated Date: Mon, 24 Jul 2017 (14:10 IST)
ಲಿಂಗಾಯುತ ಪ್ರತ್ಯೇಕ ಧರ್ಮ ಸ್ಥಾಪಿಸಲು ನೆರವಾಗುವಂತೆ ಮಠಾಧೀಶರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಲಿಂಗಾಯುತ ಧರ್ಮ ಸ್ವತಂತ್ರ ಧರ್ಮವೆಂದು ಘೋಷಿಸಲು ಸಹಕಾರ ನೀಡುವಂತೆ ಕೋರಿದ್ದಾರೆ. ರಾಜ್ಯದ ಪ್ರಮುಖ ಮಠಗಳ ಮಠಾಧೀಶರು ಮುಖ್ಯಮಂತ್ರಿಯವರೊಂದಿಗೆ ವಿಧಾನಸೌಧದಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದೆ ಧಾರವಾಡದಲ್ಲಿ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಲಿಂಗಾಯುತ ಸ್ವತಂತ್ರ ಧರ್ಮವಾಗಿರಬಹುದು ಎನ್ನುವುದು ನನ್ನ ವೈಯಕ್ತಿಕ ಅನಿಸಿಕೆಯಾಗಿದೆ. ಅಗತ್ಯವಾದಲ್ಲಿ ಕೇಂದ್ರಕ್ಕೆ ಲಿಂಗಾಯುತ ಧರ್ಮ ಸ್ವತಂತ್ರ ಧರ್ಮ ಎಂದು ಶಿಫಾರಸು ಮಾಡುವುದಾಗಿ ಭರವಸೆ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.