Publish Date: Wed, 08 Dec 2021 (20:03 IST)
Updated Date: Wed, 08 Dec 2021 (20:07 IST)
ಉತ್ತರ ಪ್ರದೇಶದಲ್ಲಿ ಮಹಿಳೆಯರಿಗಾಗಿ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಮುಂಬರುವ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಉತ್ತರ ಪ್ರದೇಶದ ಲಖ್ನೋದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಹಿಳೆಯರಿಗಾಗಿ ಭರ್ಜರಿ ಉಡುಗೊರೆಯ ಭರವಸೆ ನೀಡಿದ್ದಾರೆ. ಕಾಂಗ್ರೆಸ್‌ನಿಂದ ಮಹಿಳೆಯರಿಗಾಗಿ ಶೇ. 40ರಷ್ಟು ಟಿಕೆಟ್ ಮೀಸಲಿಡಲಾಗಿದೆ. ಇಷ್ಟೆ ಅಲ್ಲ.. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಸರ್ಕಾರಿ ಹುದ್ದೆಗಳಲ್ಲೂ ಮಹಿಳೆಯರಿಗೆ ಮೀಸಲಾತಿ ನೀಡಲಾಗುತ್ತೆ ಅಂತ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.