Select Your Language

Notifications

webdunia
webdunia
webdunia
webdunia

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ
ಕಲಬುರಗಿ , ಮಂಗಳವಾರ, 17 ಸೆಪ್ಟಂಬರ್ 2019 (19:05 IST)
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಈ ಭಾಗದ ಪ್ರಗತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಅಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾತನಾಡಿ, ಈ ಭಾಗದ ಜನರ ಭಾವನೆಗೆ ಬೆಲೆಕೊಟ್ಟು ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಉದ್ಘೋಷಣೆ ಮಾಡಲು ಸಂತಸದಿಂದ ಬಂದಿದ್ದೇನೆ.

ಪ್ರದೇಶ ಮರುನಾಮಕರಣ ಮಾಡಿದ್ದಕ್ಕೆ ಮಾತ್ರ ಅಭಿವೃದ್ಧಿ ಆಗುವುದಿಲ್ಲ. ಬದಲಾಗಿ ಇಲ್ಲಿನ ಜನರ ಅಶೋತ್ತರಗಳನ್ನು ಈಡೇರಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ ಆ ಮುಖೇನ ಹೆಚ್ಚಿನ ಅನುದಾನ ನೀಡಲಾಗುವುದು ಎಂದ್ರು.  

ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಹಣಕಾಸಿನ ತೊಂದರೆ ಆಗಬಹುದು, ಆದರೆ ಮುಂದಿನ ವರ್ಷ ಆಯವ್ಯಯದಲ್ಲಿ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ರು.

ಹೈದ್ರಾಬಾದ ಕರ್ನಾಟಕ  ಭಾಗದಲ್ಲಿ ಕೇವಲ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಮುಂದಿನ ದಿನದಲ್ಲಿ ಈ ಭಾಗದವರನ್ನು ಸಚಿವ ಸಂಪುಟಕ್ಕೆ ಪರಿಗಣಿಸಲಾಗುವುದು ಎಂದು ಸ್ಪಷ್ಠನೆ ನೀಡಿದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್ವೈ ಘೋಷಣೆ : ಹೈ.ಕ.ವಿಶೇಷ ಕೋಶದ ಪ್ರಾದೇಶಿಕ ಕಚೇರಿ ಸ್ಥಾಪನೆ