Publish Date: Tue, 29 Aug 2017 (15:07 IST)
Updated Date: Tue, 29 Aug 2017 (15:12 IST)
ಸೆಪ್ಟೆಂಬರ್ 1ಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಹುತೇಕ ಮುಹೂರ್ತ ಫಿಕ್ಸ್ ಆಗಿದೆ. ಎಚ್.ಎಂ. ರೇವಣ್ಣ, ಆರ್.ಬಿ. ತಿಮ್ಮಾಪುರ್ ಮತ್ತು ಕೆ. ಷಡಕ್ಷರಿ ಅವರು ಸಂಪುಟ ಸೇರ್ಪಡೆ ಬಹುತೇಕ ಅಂತಿಮಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇತ್ತ, ಶಾಸಕಿ ಗೀತಾ ಮಹದೇವ ಪ್ರಸಾದ್ ಸಹ ಸಚಿವ ಸ್ಥಾನದ ರೇಸ್`ನಲ್ಲಿದ್ದಾರೆಂದು ತಿಳಿದು ಬಂದಿದೆ. ಈ ಮಧ್ಯೆ, ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಮೋಟಮ್ಮ ಮತ್ತು ನರೇಂದ್ರಸ್ವಾಮಿ ಸಹ ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಸಚಿವ ಸಂಪುಟ ವಿಸ್ತರಣೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ, ಜೇನುಗೂಡಿಗೆ ಕೈಹಾಕಿದಂತಾಗಿದೆ.
ಚುನಾವಣೆಗೆ ಇನ್ನೂ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಸಚಿವ ಸಂಪುಟ ವಿಸ್ತರಣೆ ಮೂಲಕ ಅಭಿವೃದ್ಧಿಯ ಕಹಳೆ ಮೊಳಗಿಸಲು ಹೊರಟ್ಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಭಿನ್ನರ ಬಿಸಿ ಮುಟ್ಟುವ ಲಕ್ಷಣ ಕಾಣುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ