Webdunia - Bharat's app for daily news and videos

Install App

ಸರಣಿ ಅಪಘಾತ; 30 ಜನರಿಗೆ ಗಾಯ

Webdunia
ಬುಧವಾರ, 27 ಡಿಸೆಂಬರ್ 2023 (20:00 IST)
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಸರಣಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಬಸ್​ನಲ್ಲಿದ್ದ 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್​ ಬಸ್​ ಹಿಂದೆಯೇ ದುರ್ಗಾಂಬಾ ಬಸ್ ಬರುತ್ತಿತ್ತು.

ಈ ಅಪಘಾತವನ್ನು ಕಂಡ ದುರ್ಗಾಂಬಾ ಬಸ್​ ಚಾಲಕ ಬಸ್​​ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದರು. ಆದರೆ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್​​ಗಳ ಮುಖಾಂತರ ಅಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬಳಿಕ ಬಸ್​ಗಳನ್ನು ಕ್ರೈನ್ ಬಳಸಿ ತೆರವು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments