Publish Date: Fri, 19 May 2023 (10:31 IST)
Updated Date: Fri, 19 May 2023 (09:33 IST)
ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಮಾನದಂಡ ಹಾಕುತ್ತೇವೆ. ಗ್ಯಾರಂಟಿ ಸ್ಕೀಮ್ಗಳ ಮಾನದಂಡ ಬಡವರಿಗೆ ಅನ್ವಯಿಸುವುದಿಲ್ಲ. ಆದರೆ ಶ್ರೀಮಂತರಿಗೆ ಮಾನದಂಡ ಹಾಕುತ್ತೇವೆ. ಬಡವರಿಗೆ ಯಾವುದೇ ಮಾನದಂಡ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೈಕಮಾಂಡ್ ನಾಯಕರು ಒಳ್ಳೆಯ ತೀರ್ಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಉತ್ತಮ ಕಾರ್ಯ ಮಾಡುತ್ತಾರೆ. ಈಗ ಡಿಸಿಎಂ ಆಗಿ ಡಿಕೆಶಿ ಮಾತ್ರ ಪ್ರಮಾಣ ವಚನ ತೆಗೆದುಕೊಳ್ಳುತ್ತಾರೆ ಎಂಬ ಮಾಹಿತಿ ಬಂದಿದೆ ಎಂದರು.
ನಾನು ಡಿಸಿಎಂ ಸ್ಥಾನದ ಆಂಕಾಕ್ಷಿಯಲ್ಲ. ಆದರೆ ಬೇರೆ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡಿದರೆ ನಾನು ಸಹ ಬೇಡಿಕೆ ಇಡುತ್ತೇನೆ. ಬೇರೆಯವರು ಕೇಳಿದರೆ ನಾನು ಸಹ ಎಸ್ಟಿ ಸಮುದಾಯದಿಂದ ನನಗೆ ಡಿಸಿಎಂ ಸ್ಥಾನ ಕೊಡಿ ಎಂದು ಕೇಳುತ್ತೇನೆ. ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.