Select Your Language

Notifications

webdunia
webdunia
webdunia
webdunia

ಅಪ್ರಾಪ್ತೆ ಮೇಲೆ ಏಳು ಮಂದಿ ಕಾಮುಕರ ಅಟ್ಟಹಾಸ

ಅಪ್ರಾಪ್ತೆ ಮೇಲೆ ಏಳು ಮಂದಿ ಕಾಮುಕರ ಅಟ್ಟಹಾಸ
ಧರ್ಮಸ್ಥಳ: , ಶನಿವಾರ, 1 ಏಪ್ರಿಲ್ 2017 (15:33 IST)
ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಏಳು ಮಂದಿ ಯುವಕರು ಗ್ಯಾಂಗ್‌ರೇಪ್ ಎಸಗಿದ್ದರಿಂದ ಬಾಲಕಿ ಗರ್ಭಿಣಿಯಾದ ಘಟನೆ ತಡವಾಗಿ ವರದಿಯಾಗಿದೆ.
 
ಅತ್ಯಾಚಾರವೆಸಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು ಎನ್ನುವ ವಿಷಯ ಬಾಲಕಿ ಬಹಿರಂಗಪಡಿಸಿದ್ದಾಳೆ.  
 
ಕಳೆದೊಂದು ವರ್ಷದಿಂದ ಏಳು ಮಂದಿ ಯುವಕರು ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಬಾಲಕಿ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
 
ಬಾಲಕಿಯನ್ನು ಯಾವ ಯಾವ ಹೋಟೆಲ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಲಾಗಿದೆ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪರಾರಿಯಾಗಿರುವ ನಾಲ್ಕು ಮಂದಿ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಪ್ಪು ಹಣದ ತಾಂಡವ ನೃತ್ಯ: ಒಬ್ಬನ ಹೆಸ್ರಲ್ಲಿ 700 ಬೇನಾಮಿ ಕಂಪೆನಿಗಳು