ಐದು ವರ್ಷದ ಪುಟ್ಟ ಬಾಲಕಿ ಮೇಲೆ ಶಾಲಾ ಆವರಣದಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿದ ಹೇಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ.
ಕೆ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದ್ದು, ಬಾಲಕಿ ಎಲ್.ಕೆ. ಜಿ ವ್ಯಾಸಂಗ ಮಾಡುತ್ತಿದ್ದಾಳೆ.
ಸೋಮವಾರ ಎಂದಿನಂತೆ ಬಾಲಕಿ ನಾಗವಾರದಲ್ಲಿರುವ ತನ್ನ ಶಾಲೆಗೆ ತೆರಳಿದ್ದಳು. ಆಕೆ ಶಾಲಾ ಅವರಣದಲ್ಲಿದ್ದಾಗಲೇ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಮನೆಗೆ ಹೋದ ಬಳಿಕ ಬಾಲಕಿ ನಡೆದುದನ್ನೆಲ್ಲ ಪೋಷಕರಿಗೆ ತಿಳಿಸಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿದೆ.
ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ನಡೆಸಿರುವ ಪೊಲೀಸರು ಶಾಲೆಯಲ್ಲಿ ಅಳವಡಿಸಿರುವ ಸಿ.ಸಿ ಕ್ಯಾಮರಾವನ್ನು ಪರಿಶೀಲಿಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ