Select Your Language

Notifications

webdunia
webdunia
webdunia
webdunia

ಐದು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ

Sexual abuse on a five-year-old little girl
bangalore , ಗುರುವಾರ, 23 ಸೆಪ್ಟಂಬರ್ 2021 (21:56 IST)
ಬೆಂಗಳೂರು: ಐದು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆ 22 ವರ್ಷದ ಯುವಕನನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ.
ರುದ್ರೇಶ್ ನಾಯಕ್ ಬಂಧಿತ ಆರೋಪಿ.
ಈತ ಕಳೆದೊಂದು ತಿಂಗಳಿನಿಂದ ಬಾಲಕಿಗೆ ಲೈಂಗಿಕ‌ ಕಿರುಕುಳ ನೀಡುತ್ತಿದ್ದು ಬಾಲಕಿ ಕಿರುಕುಳದ ಬಗ್ಗೆ ಪೋಷಕರಿಗೆ ತಿಳಿಸಿದ್ದಳು. ಅಲ್ಲದೇ ಇದನ್ನು ಪ್ರಶ್ನಿಸಲು ಹೋದ ಬಾಲಕಿಯ ಪೋಷಕರ ಮೇಲೆ ಆರೋಪಿಯ ಮನೆಯವರು ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿದ್ದರು. ಹಲ್ಲೆ ಮತ್ತು ಲೈಂಗಿಕ ಕಿರುಕುಳದಿಂದ ಕಂಗಾಲಾಗಿದ್ದ, ಬಾಲಕಿಯ ಪೋಷಕರು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ದೂರಿನನ್ವಯ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಆರ್‌.ಶಂಕರ್ ಮನೆಯಲ್ಲಿ ಪೂಜೆ ಮುಗಿಸಿ ಹೊರಟಿದ್ದ ಅರ್ಚಕನನ್ನು ಹಿಂಬಾಲಿಸಿ ಮಾರಕಾಸ್ತ್ರಗಳಿಂದ ಹಲ್ಲೆ