Select Your Language

Notifications

webdunia
webdunia
webdunia
webdunia

ಲೈಂಗಿಕ ದೌರ್ಜನ್ಯ ಕೇಸ್: ರಾಜ್ಯ ಸರಕಾರದಿಂದ ವರದಿ ಕೇಳಿದ ರಾಜ್ಯಪಾಲರು

ಲೈಂಗಿಕ
ಕಮ್ಮನಹಳ್ಳಿಯಲ್ಲಿ ನಡೆದ ಯುವತಿ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ವಜೂಬಾಯಿ ವಾಲಾ ಅವರು ರಾಜ್ಯ ಸರಕಾರದಿಂದ ವರದಿ ಕೇಳಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಇದು ರಾಜ್ಯಪಾಲರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೆ ಬೆಂಗಳೂರಿನ  ಕಮ್ಮನಹಳ್ಳಿಯಲ್ಲಿ ಯುವತಿಯನ್ನು ಅಡ್ಡಗಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಹೇಯ ಕೃತ್ಯ ತಡವಾಗಿ ಬೆಳಕಿಗೆ ಬಂದಿತ್ತು.
 
ಆಟೋದಿಂದ ಇಳಿದು ಮನೆಗೆ ತೆರಳುತಿದ್ದ ಯುವತಿಯನ್ನು ಅಡ್ಡಗಟ್ಟಿದ ಇಬ್ಬರು ಕಾಮುಕರು, ನಡುರಸ್ತೆಯಲ್ಲಿಯೇ ಯುವತಿಯನ್ನು ಎಳೆದಾಡಿ ಅಟ್ಟಹಾಸ ಮೆರೆದಿದ್ದರು. ಈ ಹೇಯ ಕೃತ್ಯ ರಸ್ತೆ ಬದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಅಧಿಕಾರಕ್ಕೆ ಬಂದ್ರು ರಾಯಣ್ಣ ಬ್ರಿಗೇಡ್ ನಿಲ್ಲುವುದಿಲ್ಲ: ಕೆ.ಎಸ್.ಈಶ್ವರಪ್ಪ