Select Your Language

Notifications

webdunia
webdunia
webdunia
webdunia

ಲೈಂಗಿಕ ದೌರ್ಜನ್ಯ ಪ್ರಕರಣ: ಡಾ.ಸೂರಜ್‌ ವಿರುದ್ಧ ದೂರು ನೀಡಿದ ಸಂತ್ರಸ್ತ

sooraj revanna

Sampriya

ಹೊಳೆನರಸೀಪುರ , ಶನಿವಾರ, 22 ಜೂನ್ 2024 (20:29 IST)
Photo Courtesy X
ಹೊಳೆನರಸೀಪುರ: ಲೈಂಗಿಕ ದೌರ್ಜನ್ಯ ಪ್ರಕರಣದಡಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್‌ ರೇವಣ್ಣ ವಿರುದ್ಧ ಸಂತ್ರಸ್ತ ನೀಡಿದ ದೂರಿನಂತೆ  ಹೊಳೆನರಸೀಪುರದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಎಸ್ಪಿ ವೆಂಕಟೇಶ್‌ ನಾಯ್ದು ನೇತೃತ್ವದಲ್ಲಿ ಹೇಳಿಕೆ ದಾಖಲಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಹಾಸನದ ಪೊಲೀಸ್‌ ವರಿಷ್ಠಾಧಿಕಾರಿಗೆ ಸಂತ್ರಸ್ತ ದೂರು ಸಲ್ಲಿಸಿದ್ದು, ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಹೇಳಿಕೆ ಪಡೆಯಬೇಕಿದ್ದು, ಅದಕ್ಕಾಗಿ ಸಂತ್ರಸ್ತ ಗ್ರಾಮಾಂತರ ಠಾಣೆಗೆ ಬಂದಿದ್ದು ದೂರು ನೀಡಿದ್ದು, ಹೇಳಿಕೆ ಪಡೆದ ನಂತರ ಪ್ರಕರಣ ದಾಖಲಾಗಲಿದೆ.

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಬಳಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಹೀರೋ ಆಗ್ಬಿಟ್ರಿ ಸರ್.. ದರ್ಶನ್ ಜೈಲಿಗೆ ಕಳುಹಿಸಿದ ಎಸಿಪಿ ಚಂದನ್ ಗತ್ತು ನೋಡಿ