Publish Date: Fri, 10 May 2024 (19:28 IST)
Updated Date: Fri, 10 May 2024 (19:31 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ವಕೀಲ, ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.
ಏಪ್ರಿಲ್ 1ರಂದು ಮಹಿಳೆ ನೀಡಿದ ದೂರಿನಲ್ಲಿ ನಿವೇಶನವನ್ನು ಮಾರಿಸಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಹೆದರಿಸಿ, ಬೆದರಿಸಿ ನನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೊ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ದೇವರಾಜೇಗೌಡ, ಹಾಸನದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮೇ 8 ರಂದು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದೆ.
Sampriya
Publish Date: Fri, 10 May 2024 (19:28 IST)
Updated Date: Fri, 10 May 2024 (19:31 IST)