Webdunia - Bharat's app for daily news and videos

Install App

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ! ಅಪರಾಧಿಗೆ 12 ವರ್ಷ ಜೈಲು

Webdunia
ಬುಧವಾರ, 16 ನವೆಂಬರ್ 2022 (09:57 IST)
ತುಮಕೂರು : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ತುಮಕೂರು ಜಿಲ್ಲಾ ಸೆಷನ್ ನ್ಯಾಯಾಲಯವು 6 ತಿಂಗಳ ಬಳಿಕ 12 ವರ್ಷ ಜೈಲು ಶಿಕ್ಷೆ ಹಾಗೂ 75 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ತುಮಕೂರಿನ ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾರ್ಕ್ ಮೊಹಲ್ಲಾ ನಿವಾಸಿ ಜಾವದ್ ಶಿಕ್ಷೆಗೆ ಗುರಿಯಾದ ದೋಷಿ.  ಕಳೆದ ಮೇ 28 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾರ್ಕ್ ಮೊಹಲ್ಲಾದ ಪೋತರಾಜನ ಗದ್ದುಗೆ ಬಳಿ 7 ಮತ್ತು 9 ವರ್ಷದ ಬಾಲಕಿಯರು ಆಟವಾಡುತ್ತಿದ್ದರು.

ಅಲ್ಲಿಗೆ ಬಂದ ಜಾವದ್ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಇಬ್ಬರನ್ನೂ ಪಾರ್ಕ್ ಮೊಹಲ್ಲಾಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಮಕ್ಕಳು ಅಳುತ್ತಿರುವುದು ಕಂಡು ತಾಯಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ನೊಂದ ಬಾಲಕಿಯರ ತಾಯಿ ಶಿರಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಅಂದಿನ ಪಿಎಸ್ಐ ಲಕ್ಷ್ಮೀನಾರಾಯಣ್ ಪ್ರಕರಣ ದಾಖಲಿಸಿ ಆರೋಪಿಯನ್ನ ಬಂಧಿಸಿದ್ದರು. ನಂತರ ತನಿಖಾಧಿಕಾರಿಗಳಾದ ಪೊಲೀಸ್ ಇನ್ಸ್ಪೆಕ್ಟರ್ ವಿ.ಲಕ್ಷ್ಮಯ್ಯ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 

ಜಿಲ್ಲಾ ಸೆಷನ್ಸ್ ಪೋಕ್ಸೋ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಜಾವದ್’ಗೆ ಕಲಂ 363 ಐಪಿಸಿಗೆ 5 ವರ್ಷ ಶಿಕ್ಷೆ, 25 ಸಾವಿರ ರೂ. ದಂಡ ಹಾಗೂ ಕಲಂ 9 ಅಡಿ 7 ವರ್ಷ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಸೆಷನ್ಸ್ ಪೋಕ್ಸೋ ವಿಶೇಷ ನ್ಯಾಯಾಧೀಶರಾದ ಪಿ.ಸಂಧ್ಯಾ ರಾವ್ ತೀರ್ಪು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ