ತುಮಕೂರು: ನ್ಯಾಯ ನೀಡಬೇಕೆಂದು ಠಾಣೆ ಮೆಟ್ಟಿಲೇರಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿಲಾಗಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದ ಹಾಗೇ ಇದೀಗ ಡಿವೈಎಸ್‌ಪಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಏನಿದು ಘಟನೆ: ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆ ದೂರು ನೀಡಿದ್ದಾರೆ. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಧನಾತ್ಮಕವಾಗಿ ಮಾತನಾಡಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು ಎಂದಿದ್ದಾರೆ.
ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ಸಾರೆ. ಈ ಸಂದರ್ಭದಲ್ಲಿ ಮಹಿಳೆಯನ್ನು ಪುಸಲಾಯಿಸಿ, ಠಾಣೆಯಲ್ಲೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಇದನ್ನು ಅಲ್ಲೇ ಇದ್ದವರು ವಿಡಿಯೋ ಮಾಡಿದ್ದಾರೆ. ಈ ವೇಳೆ ಮಹಿಳೆ ಯಾರೋ ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯುವುದನ್ನು ನೋಡಿದ್ದು, ಕೂಡಲೇ ವಿಡಿಯೋ ಮಾಡುವ ವ್ಯಕ್ತಿ ಅಲ್ಲಿಂದ ಪರಾರಿ ಆಗಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಡಿವೈಎಸ್‌ಪಿ ರಾಮಚಂದ್ರಪ್ಪ ರಾತ್ರೋ ರಾತ್ರಿ ತಾವು ಕೆಲಸ ಮಾಡುವ ಸ್ಥಳದಿಂದ ಪರಾರಿ ಆಗಿದ್ದಾರೆ.