ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

Sampriya
ಮಂಗಳವಾರ, 18 ನವೆಂಬರ್ 2025 (18:38 IST)
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ, ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಅವರಿಗೆ   ಸೇರಿ ನಾಲ್ವರು ಆರೋಪಿಗಳಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಕೆಲವು ದಿನಗಳ ಹಿಂದೆ ಈ ಪ್ರಕರಣ ಸಂಬಂಧ ಹೈಕೋರ್ಟ್‌ ಟ್ರಯಲ್‌ಗೆ ಅನುಮತಿ ನೀಡಿತ್ತು. ಇದೀಗ 1ನೇ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದು, ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ.

ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸಕ್ಕೆ ಸಹಾಐ ಕೇಳಲು ಬಂದ ಯುವತಿ ಮೇಲಯೇ ಬಿಎಸ್‌ವೈ ಅವರು ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಆರೋಪವಿದೆ. ‌‌

ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು.

ಬಿಎಸ್‌ವೈ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. 

ಇನ್ನೂ ಪ್ರಕರಣದ ಸಾಕ್ಷ್ಯ ನಾಶ ಹಾಗೂ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪದ ಮೇಲೆ ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರ ವಿರುದ್ಧ ಜೂನ್ 2024ರಲ್ಲಿ ಸಿಐಡಿ 750 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ