Webdunia - Bharat's app for daily news and videos

Install App

ಬೆಂಗಳೂರು: ಮತ್ತೆ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

Webdunia
ಮಂಗಳವಾರ, 4 ಆಗಸ್ಟ್ 2015 (10:56 IST)
ಬೆಂಗಳೂರು ಮತ್ತೆ ಬೆಚ್ಚಿ ಬಿದ್ದಿದೆ. ಮೂರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಸೆಕ್ಯೂರಿಟಿ ಗಾರ್ಡ್‌ನನ್ನು ಬಂಧಿಸಲಾಗಿದೆ. 

ನಿನ್ನೆ ಮಗು ಶಾಲೆಗೆ ಹೋಗಿದ್ದ ವೇಳೆ ಆಕೆಗೆ ಚಾಕಲೇಟ್ ಕೊಟ್ಟು ಶಾಲೆಯ ಆವರಣದಲ್ಲೇ ಸೆಕ್ಯೂರಿಟಿ ಗಾರ್ಡ್ ಲೈಂಗಿಕ  ದೌರ್ಜನ್ಯವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ. 
 
ಮಗು ಶಾಲೆಯಿಂದ ಮನೆಗೆ ಬಂದಾಗ ಗುಪ್ತಾಂಗದಲ್ಲಿ ನೋವಾಗುತ್ತಿದೆ ಎಂದು ಪೋಷಕರ ಬಳಿ ಹೇಳಿಕೊಂಡಿದೆ. ಯಾರು ಆಕೆಯ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂಬುದನ್ನು ಹೇಳಲು ಅದು ಅಸಮರ್ಥವಾಗಿತ್ತು. ಆದರೆ ಸೆಕ್ಯೂರಿಟಿ ಗಾರ್ಡ್ ಆಕೆಗೆ ಚಾಕಲೇಟು ನೀಡಿದ್ದನ್ನು ಅದೇ ಶಾಲೆಯಲ್ಲಿ ಓದುತ್ತಿದ್ದ ಅವಳಣ್ಣ ತಂದೆ-ತಾಯಿ ಬಳಿ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೋಷಕರು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಶೋಷಣೆ ಪ್ರಕರಣವನ್ನು ದಾಖಲಿಸಿದ್ದಾರೆ. ಬಳಿಕ ಮಗುವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಮಗುವಿನ ಮೇಲೆ ಲೈಂಗಿಕ ಹಲ್ಲೆ ನಡೆದಿರೋದು ಸ್ಪಷ್ಟವಾಗಿತ್ತು. 
 
ಸೆಕ್ಯೂರಿಟಿ ಗಾರ್ಡ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನೇ ಕೃತ್ಯ ಎಸಗಿರೋದು ಖಚಿತಗೊಂಡಿದೆ. ಮಗು ಕೂಡ ಆತನನ್ನು ಗುರುತಿಸಿದೆ. 
 
ಪೋಕ್ಸೋ ಕಾಯಿದೆಯಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. 
 
ಶಾಲೆಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ