Publish Date: Fri, 16 Jun 2017 (16:40 IST)
Updated Date: Fri, 16 Jun 2017 (16:42 IST)
ಬಿಹಾರ್ ಮೂಲದ ಯುವತಿ ಮೇಲೆ ಹಲ್ಲಿ ಎಸೆದು ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.
ಇಂದಿರಾ ನಗರದ ಸಿಎಂಎಚ್ ರಸ್ತೆಯ ಜಂಕ್ಷನ್‌ನಲ್ಲಿ ಬಿಹಾರ್ ಮೂಲದ ಯುವತಿ ತೆರಳುತ್ತಿರುವಾಗ ಆಕೆಯ ಬಳಿ ಬಂದ ಯುವಕನೊಬ್ಬ ಆಕೆಯ ಮೇಲೆ ಪ್ಲ್ಯಾಸ್ಟಿಕ್ ಹಲ್ಲಿ ಎಸೆದು ಹಲ್ಲಿ ತೆಗೆಯುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ಮಹಿಳಾ ಟೆಕ್ಕಿ ಇಂದಿರಾನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ. ಆರೋಪಿಯ ಬಗ್ಗೆ ಮಹತ್ವದ ಸುಳಿವು ದೊರೆತಿದ್ದು, ಶೀಘ್ರದಲ್ಲಿಯೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.