Publish Date: Fri, 15 Mar 2024 (09:44 IST)
Updated Date: Fri, 15 Mar 2024 (09:55 IST)
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೇ ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಕೇಸ್ ದಾಖಲಾಗಿದೆ.
ಸಂತ್ರಸ್ತೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ತಾಯಿ ಜೊತೆಗೆ ಬಂದಿದ್ದ ಸಂತ್ರಸ್ತೆ ದೂರು ನೀಡಿದ್ದು, ಬಿಎಸ್ ವೈ ಮೇಲೆ ಪೋಕ್ಸೋ ಮತ್ತು ಸೆಕ್ಷನ್ 354 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 2 ರಂದು ಘಟನೆ ನಡೆದಿರುವುದಾಗಿ ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಸಹಾಯ ಕೇಳಲು ಹೋಗಿದ್ದಾಗ ಬಿಎಸ್ ವೈ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೇವಲ ಯಡಿಯೂರಪ್ಪ ಮಾತ್ರವಲ್ಲ, ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ 53 ಮಂದಿ ವಿರುದ್ಧ ಆರೋಪ ಹೊರಿಸಿದ್ದಾಳೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೇ ಇದರ ತಯಾರಿಯಲ್ಲಿರುವಾಗ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ ತಂದೊಡ್ಡಲಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಗಂಭೀರ ಪ್ರಕರಣವಾಗಿದ್ದು, ಬಂಧನದ ಭೀತಿಯೂ ಎದುರಾಗಿದೆ.